ಉದ್ಯೋಗಾಕಾಂಕ್ಷಿಗಳಿಗೆ ಸಂತಸದ ಸುದ್ದಿ! ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (C-DAC) ನೇಮಕಾತಿ(C-DAC Recruitment) ( 2026 ಒಟ್ಟು 805 ಪ್ರಾಜೆಕ್ಟ್ ಇಂಜಿನಿಯರ್, ಪ್ರಾಜೆಕ್ಟ್ ಟೆಕ್ನಿಷಿಯನ್ ಹಾಗೂ ಇನ್ನಿತರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
C-DAC Recruitment In kannada

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು 01-02-2026 ರಿಂದಲೇ ಪ್ರಾರಂಭಗೊಂಡಿದ್ದು, 20-02-2026 ಕೊನೆಯ ದಿನಾಂಕವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು C-DAC ಅಧಿಕೃತ ವೆಬ್ಸೈಟ್ cdac.in ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ/ ಬಿ.ಟೆಕ್, ಎಂ.ಇ/ ಎಂ.ಟೆಕ್, ಎಂ.ಸಿ.ಎ, ಎಂ.ಎಸ್ಸಿ ಪದವಿಯನ್ನು ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಹುದ್ದೆಯ ಕುರಿತು ಇನ್ನಷ್ಟು ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ಪಡೆದುಕೊಳ್ಳಬಹುದಾಗಿದೆ.
ಹುದ್ದೆಯ ಕಿರು ನೋಟ:
| ಕಂಪನಿ ಹೆಸರು: ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (C-DAC Recruitment) ಹುದ್ದೆಯ ಹೆಸರು: ಪ್ರಾಜೆಕ್ಟ್ ಇಂಜಿನಿಯರ್, ಪ್ರಾಜೆಕ್ಟ್ ಟೆಕ್ನಿಷಿಯನ್ ಹಾಗೂ ಇತರೆ ಹುದ್ದೆಗಳು ಹುದ್ದೆಗಳ ಸಂಖ್ಯೆ: 805 ಹುದ್ದೆಗಳು ವಿದ್ಯಾರ್ಹತೆ: ಬಿಇ/ ಬಿ.ಟೆಕ್, ಎಂ.ಇ/ ಎಂ.ಟೆಕ್, ಎಂ.ಸಿ.ಎ, ಎಂ.ಎಸ್ಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-02-2026 |
ಹುದ್ದೆಯ ಸಂಕ್ಷಿಪ್ತ ಮಾಹಿತಿ:
ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (C-DAC Recruitment) 2026 ರ ನೇಮಕಾತಿಯಲ್ಲಿ ಒಟ್ಟು 805 ಪ್ರಾಜೆಕ್ಟ್ ಇಂಜಿನಿಯರ್, ಪ್ರಾಜೆಕ್ಟ್ ಟೆಕ್ನಿಷಿಯನ್, ಹಾಗೂ ಇತರೆ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಗರಿಷ್ಠ 56 ವರ್ಷ ವಯೋಮಿತಿ ಹೊಂದಿದ್ದು, ಬಿಇ/ ಬಿ.ಟೆಕ್, ಎಂ.ಇ/ ಎಂ.ಟೆಕ್, ಎಂ.ಸಿ.ಎ, ಎಂ.ಎಸ್ಸಿ ಪದವಿಯನ್ನು ಪೂರ್ಣಗೊಳಿಸಿರಬೇಕಾಗುತ್ತದೆ.
ಹುದ್ದೆಯ ವಿವರ:
| ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
| C-DAC ನೋಯ್ಡಾ | 283 ಹುದ್ದೆಗಳು |
| C-DAC ಹೈದರಾಬಾದ್ | 105 ಹುದ್ದೆಗಳು |
| C-DAC ಚೆನ್ನೈ | 97 ಹುದ್ದೆಗಳು |
| C-DAC ಬೆಂಗಳೂರು | 93 ಹುದ್ದೆಗಳು |
| C-DAC ತಿರುವನಂತಪುರಂ | 73ಹುದ್ದೆಗಳು |
| C-DAC ಪುಣೆ | 65ಹುದ್ದೆಗಳು |
| C-DAC ಸಿನೆ | 27 ಹುದ್ದೆಗಳು |
| C-DAC ಮುಂಬೈ | 27 ಹುದ್ದೆಗಳು |
| C-DAC ದೆಹಲಿ | 20 ಹುದ್ದೆಗಳು |
| C-DAC ಕೋಲ್ಕತ್ತಾ | 15 ಹುದ್ದೆಗಳು |
ಶೈಕ್ಷಣಿಕ ಅರ್ಹತೆ:
- ಪ್ರಾಜೆಕ್ಟ್ ಟೆಕ್ನಿಷಿಯನ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ITI ಅಥವಾ ಡಿಪ್ಲೋಮಾ ಪೂರ್ಣಗೊಳಿಸಿರಬೇಕು.
- ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ ಬಿಇ/ ಬಿ.ಟೆಕ್, ಎಂ.ಇ/ ಎಂ.ಟೆಕ್, ಬಿ.ಸಿ.ಎ ಅಥವಾ Ph.D ಪದವಿಯಲ್ಲಿ ಕನಿಷ್ಠ 60% ಅಂಕವನ್ನು ಹೊಂದಿರಬೇಕು.
- ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ/ ಬಿ.ಟೆಕ್, ಬಿ.ಸಿ.ಎ, ಬಿ.ಎಸ್ಸಿ ಪದವಿಯನ್ನು ಹೊಂದಿರಬೇಕು.
- ಇತರೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ Ph.D ಅಥವಾ ಸ್ನಾತಕೋತ್ತರ ಪದವಿ ಹೊಂದಿರಬೇಕು.
ವಯೋಮಿತಿ ಮತ್ತು ವಯೋಮಿತಿ ಸಡಿಲಿಕೆ:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 56 ವರ್ಷ ವಯಸ್ಸನ್ನು ಹೊಂದಿರಬೇಕು.
- ಭಾರತ ಸರ್ಕಾರದ ನಿಯಮಗಳ ಪ್ರಕಾರ, ಪ್ರತಿ ಹುದ್ದೆಗೆ ಅನುಗುಣವಾಗಿ ಮೀಸಲಾತಿ ವರ್ಗಕ್ಕೆ ಸೇರಿದ ಅರ್ಜಿದಾರರಿಗೆ ವಯಸ್ಸಿನ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ ಸಂಸ್ಥೆಯ ಪ್ರಾಜೆಕ್ಟ್ ಇಂಜಿನಿಯರ್, ಪ್ರಾಜೆಕ್ಟ್ ಟೆಕ್ನಿಷಿಯನ್ ಹಾಗೂ ಇನ್ನಿತರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
C-DAC (C-DAC Recruitment) ಮಾನದಂಡಗಳ ಪ್ರಕಾರ, ಕೆಲವು ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
- ಶೈಕ್ಷಣಿಕ ಅರ್ಹತೆ ಹಾಗೂ ಅನುಭವದ ಆಧಾರದ ಮೇಲೆ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಮಾಡಲಾಗುವುದು.
- ನೇರ ಸಂದರ್ಶನ
- ದಾಖಲಾತಿ ಪರಿಶೀಲನೆ
ಅರ್ಜಿ ಸಲ್ಲಿಸುವ ವಿಧಾನ:
- C-DAC ಅಧಿಕೃತ ವೆಬ್ಸೈಟ್ https://cdac.in/ ಗೆ ಭೇಟಿ ನೀಡಿ.
- ಆನ್‌ಲೈನ್ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ ಮತ್ತು ನೋಂದಣಿ ಪೂರ್ಣಗೊಳಿಸಿ.
- ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
- ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
- ಅರ್ಜಿಯನ್ನು ಸಲ್ಲಿಸಿ ಮತ್ತು ಮುದ್ರಣವನ್ನು ತೆಗೆದುಕೊಳ್ಳಿ.
ಹುದ್ದೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 01-02-2026
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-02-2026
ನೇರ ಸಂದರ್ಶನ ನಡೆಯುವ ದಿನಾಂಕ: ಅಭ್ಯರ್ಥಿಗಳ ಇಮೇಲ್ ಗೆ ಕಳುಹಿಸಲಾಗುವುದು.
ಪ್ರಮುಖ ಲಿಂಕುಗಳು:
ಅಧಿಕೃತ ವೆಬ್ಸೈಟ್ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಅಂತಿಮ ತೀರ್ಮಾನ:
ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ ಕಂಪನಿಯಲ್ಲಿ ಪ್ರಾಜೆಕ್ಟ್ ಇಂಜಿನಿಯರ್, ಪ್ರಾಜೆಕ್ಟ್ ಟೆಕ್ನಿಷಿಯನ್, ಹಾಗೂ ಇತರೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ 20, 2026 ರ ವರೆಗೂ ಅವಕಾಶವಿದ್ದು, ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

